ಬೆಳಗಾವಿ: ಕರ್ತವ್ಯದಲ್ಲಿದ್ದ ಹವಾಲ್ದಾರ್ ವೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಬೆಳಗಾವಿ (Belagavi) ಜಿಲ್ಲೆಯ ಕುಡಚಿ ಪೊಲೀಸ್ ಠಾಣೆಯಲ್ಲಿ (Kuduchi Police Station) ಈ ಘಟನೆ ನಡೆದಿದೆ. ಕರ್ತವ್ಯದಲ್ಲಿದ್ದ ಯಲ್ಲಪ್ಪ ಭೋಜ(46) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಕರ್ತವ್ಯದಲ್ಲಿದ್ದ ಯಲ್ಲಪ್ಪ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ನಿವಾಸಿಯಾದ ಹವಾಲ್ದಾರ್ ಯಲ್ಲಪ್ಪ ಅವರು ಕುಡಚಿ ಚೆಕ್ಪೋಸ್ಟ್ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದರು. ಕಳೆದ 9 ತಿಂಗಳಿನಿಂದ ಕುಡಚಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.