ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ಡ್ಯಾನ್ಸ್ ಬಾರ್ ಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ನಗರದ ಕ್ಲಬ್ ಒನ್, ರಂಬಾ, ಬ್ರಿಗೇಡ್ ಬ್ಲೂ ಸೇರಿದಂತೆ 17ಕ್ಕೂ ಅಧಿಕ ಡ್ಯಾನ್ಸ್ ಬಾರ್ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಓವರ್ ಟೈಂ, ತುಂಡು ಉಡುಗೆ ತೊಟ್ಟು ಡ್ಯಾನ್ಸ್ ಸೇರಿದಂತೆ ನಿಯಮಗಳ ಉಲ್ಲಂಘನೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಡ್ಯಾನ್ಸ್ ಬಾರ್ ಗಳಲ್ಲಿ ಕೆಲವು ರೂಲ್ಸ್ ಗಳನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಉಪ್ಪಾರಪೇಟೆ ಸುತ್ತಮುತ್ತ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಎಲ್ಲರನ್ನು ಹೊರಗೆ ಕಳುಹಿಸಲಾಗಿತ್ತು. ಕೇಂದ್ರ ವಿಭಾಗ ಹಾಗೂ ಪಶ್ಚಿಮ ವಿಭಾಗದ ಕಬ್ಬನ್ ಪಾರ್ಕ್, ಅಶೋಕ್ ನಗರ, ಎಸ್.ಜೆ. ಪಾರ್ಕ್, ಉಪ್ಪಾರಪೇಟೆ ಸೇರಿದಂತೆ ಅನೇಕ ಠಾಣಾ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಲಾಗಿದೆ. ಸದ್ಯ ಆಯಾ ಠಾಣೆಗಳಲ್ಲಿ ಉಲ್ಲಂಘನೆಯಾದರೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.