ಮಂಗಳೂರು: ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಕ್ಕೆ ಯುವಕನ ಹತ್ಯೆ ಮಾಡಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಅಮಾನತು ಮಾಡಲಾಗಿದೆ.
ಜಿಲ್ಲೆಯ ಕುಡುಪು (Kudupu) ಬಳಿ ಕೇರಳ (Kerala) ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ.
ಇನ್ಸ್ಪೆಕ್ಟರ್ ಶಿವಕುಮಾರ್, ಹೆಡ್ ಕಾನ್ಸ್ಟೇಬಲ್ ಚಂದ್ರ.ಪಿ ಮತ್ತು ಕಾನ್ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಮೂವರ ವಿರುದ್ಧ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿರುವ ಆರೋಪ ಕೇಳಿ ಬಂದಿತ್ತು.ಶಿವಕುಮಾರ್ ಆರಂಭದಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು. ವಿವಾದ ದೊಡ್ಡದಾದ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದರು. ಶಿವಕುಮಾರ್ ಅವರನ್ನು ಅಮಾನತು ಮಾಡುವಂತೆ ಗೃಹ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದರು.