ಮೂಲತಃ ಕರ್ನಾಟಕದವರೇ ಆಗಿರುವ ನಟಿ ಪೂಜಾ ಹೆಗ್ಡೆ ತೆಲುಗು, ತಮಿಳು ಸಿನಿಮಾಗಳಲ್ಲಿ ಮಿಂಚಿದವರು. ಬಾಲಿವುಡ್ನಲ್ಲೂ ಪೂಜಾ ಅದೃಷ್ಟ ಪರೀಕ್ಷೆ ಮಾಡಿದ್ದಾರೆ.
ಸಿನಿಮಾ ರಂಗಕ್ಕೆ ಕಾಲಿಟ್ಟು ಹಲವು ವರ್ಷಗಳ ಬಳಿಕ ಪೂಜಾ ಹೆಗ್ಡೆ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಸಿನಿಮಾದಲ್ಲಿ ಪೂಜಾ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ವಿಚಾರ ಗಾಂಧಿನಗರದಲ್ಲಿ ಜೋರಾಗಿ ಕೇಳಿ ಬರುತ್ತಿದೆ.
ಇತ್ತೀಚೆಗಷ್ಟೇ ಸುದೀಪ್ ಅವರ ಬಿಲ್ಲ ರಂಗ ಭಾಷ ಸಿನಿಮಾ ಸೆಟ್ಟೇರಿದೆ. ಆದರೆ, ಈ ಸಿನಿಮಾಗೆ ನಾಯಕಿ ಯಾರು ಎಂಬುವುದು ಇನ್ನೂ ಗುಟ್ಟಾಗಿಯೇ ಉಳಿದಿದೆ. ಇದರ ನಡುವೆ ಪೂಜಾ ಹೆಗ್ಡೆ ಅವರ ಹೆಸರು ಕೂಡ ಕೇಳಿ ಬರುತ್ತಿದೆ. ಆದರೆ, ಚಿತ್ರ ತಂಡ ಮಾತ್ರ ಯಾವುದೇ ಅಧಿಕೃತ ಹೆಸರು ಘೋಷಣೆ ಮಾಡಿಲ್ಲ.