ಕಳೆದ ಕೆಲ ಸಮಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಾಟಿಕನ್ ಸಿಟಿ ಧರ್ಮ ಗುರು ರೋಮನ್ ಕ್ಯಾಥೋಲಿಕ್ ಚರ್ಚ್ ನ ಮುಖ್ಯಸ್ಥ ಪೋಪ್ ಫ್ರಾನ್ಸಿಸ್ ನಿಧನರಾಗಿದ್ದಾರೆ.
ವ್ಯಾಟಿಕನ್ ನ ಕಾಸಾ ಸಾತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ, ನ್ಯುಮೋನಿಯಾ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ದಿನ ಕಳೆದಂತೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅನಾರೋಗ್ಯ ಕಾರಣ ಅವರನ್ನು ಫೆಬ್ರವರಿ 14ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಮಧ್ಯೆ ಕಿಡ್ನಿ ಸಮಸ್ಯೆಯೂ ಉಲ್ಬಣಿಸಿತ್ತು. ಆರೋಗ್ಯ ತೀವ್ರ ಹದಗೆಟ್ಟ ಕಾರಣ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು.
ಇತ್ತೀಚೆಗೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತಾದರೂ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿರಲಿಲ್ಲ. ರೋಮನ್ ಕ್ಯಾಥೋಲಿಕ್ ಚರ್ಚಿನ ಮೊದಲ ಅಮೆರಿಕನ್ ಪೋಪ್ ಆಗಿದ್ದ ಅವರು 2013ರಲ್ಲಿ ತಮ್ಮ ಕಾರ್ಯಭಾರ ಸ್ವೀಕರಿಸಿದ್ದರು.