ಬೆಂಗಳೂರು: ಅಗ್ನಿ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಎಂಬ ಕಾರಣಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದ ಪವರ್ ಕಟ್ ಮಾಡಲಾಗಿದೆ.
ಅಗ್ನಿಸುರಕ್ಷತಾ ಮುನ್ನೆಚ್ಚರಿಕೆ ಕ್ರಮವಹಿಸಿದ ಹಿನ್ನೆಲೆಯಲ್ಲಿ ಬೆಸ್ಕಾಂನಿಂದ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ. ಸಾವಿರಾರು ಜನ ಸೇರುವ ಚಿನ್ನಸ್ವಾಮಿ ಕ್ರೀಡಾಂಗಣ ಇಲ್ಲಿಯವರೆಗೂ ಫೈರ್ ಸೇಫ್ಟಿ ಸರ್ಟಿಫಿಕೇಟ್ ಪಡೆದಿಲ್ಲ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಅಗ್ನಿಶಾಮಕ ದಳದ ಪೊಲೀಸ್ ಮಹಾ ನಿರ್ದೇಶಕರು ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಪತ್ರ ಬರೆದಿದ್ದರು. ಈ ಕುರಿತು ಬೆಸ್ಕಾಂ ಎಂಡಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಬೆಸ್ಕಾಂ ವಿದ್ಯುತ್ ಕಟ್ ಮಾಡಿದೆ.