ಬೆಂಗಳೂರು: ಪ್ರವೀಣ್ ನೆಟ್ಟಾರು(Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಇಂದು ಇನ್ನೂ 4 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 21 ಆರೋಪಿಗಳನ್ನ ಬಂಧಿಸಲಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. 2022ರ ಜು.26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು.
ಅಬ್ದುಲ್ ರೆಹಮಾನ್, ನೌಷದ್, ಅಬ್ದುಲ್ ನಾಸೀರ್, ಅತೀಕ್ ಅಹ್ಮದ್ ವಿರುದ್ಧ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಈ ನಾಲ್ವರಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ ಮತ್ತು ಅವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಎನ್ಐಎ ಹೇಳಿದೆ. ಈ ಮೂಲಕ ಪ್ರಕರಣದ ಒಟ್ಟು ಆರೋಪಿಗಳ ಸಂಖ್ಯೆ 27 ಆಗಿದೆ.
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತರು 2022 ರಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಎನ್ಐಎ ತನ್ನ ಎರಡನೇ ಪೂರಕ ಆರೋಪಪಟ್ಟಿಯಲ್ಲಿ ಅಬ್ದುಲ್ ನಾಸಿರ್, ನೌಶಾದ್, ಅಬ್ದುಲ್ ರೆಹಮಾನ್ ಮತ್ತು ಅತೀಕ್ ಅಹ್ಮದ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.