ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದಿನಿಂದ ಮೂರು ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ.
ಈ ಕುರಿತು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಕೈಗೊಂಡ ನಂತರ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಪ್ರವಾಸ ಕೈಗೊಂಡಿದ್ದಾರೆ. ಕೆನಡಾ ಸೇರಿದಂತೆ ಮೆಡಿಟರೇನಿಯನ್ ರಾಷ್ಟ್ರಗಳಾದ ಸೈಪ್ರಸ್ ಮತ್ತು ಕ್ರೊಯೇಷಿಯಾ ದೇಶಕ್ಕೂ ಭೇಟಿ ನೀಡಲಿದ್ದಾರೆ.
ಖಲಿಸ್ತಾನಿ ಸಮಸ್ಯೆಯಿಂದಾಗಿ ನವದೆಹಲಿ ಮತ್ತು ಒಟ್ಟಾವಾ ನಡುವಿನ ರಾಜತಾಂತ್ರಿಕ ಸಂಬಂಧ ಹದಗೆಟ್ಟಿದ್ದು, ಪುನರ್ ಸ್ಥಾಪಿಸಲು ಯತ್ನಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಅವರ ಕೆನಡಾ ಭೇಟಿ ಕೂಡ ಮಹತ್ವ ಪಡೆದಿದೆ. ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅವರ ಆಹ್ವಾನದ ಮೇರೆಗೆ ಕೆನಡಾದ ಕನನಾಸ್ಕಿಸ್ಗೆ ಪ್ರದಾನಿ ಭೇಟಿ ನೀಡಲಿದ್ದಾರೆ. ಇಂಧನ ಭದ್ರತೆ, ತಂತ್ರಜ್ಞಾನ ಮತ್ತು ನಾವೀನ್ಯತೆ ಸೇರಿದಂತೆ ಪ್ರಮುಖ ಜಾಗತಿಕ ವಿಷಯಗಳ ಬಗ್ಗೆ ಮಹತ್ವದ ಚರ್ಚೆಯಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ.