ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಖಡಕ್ ರೊಟ್ಟಿ ಹಾಡಿ ಹೊಗಳಿದ್ದಾರೆ.
ಖಡಕ್ ರೊಟ್ಟಿ ಹೊಗಳಿದ್ದಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರ ಪರಿಶ್ರಮವನ್ನು ಕೂಡ ಮೆಚ್ಚಿದ್ದಾರೆ. ಮನ್ ಕಿ ಬಾತ್ನ (Mann Ki Baat) 123ನೇ ಸರಣಿಯಲ್ಲಿ ರೊಟ್ಟಿ ಬಗ್ಗೆ ಹೊಗಳಿದ್ದಾರೆ. ಮಹಿಳಾ ಸ್ವಾವಲಂಬನೆ ಭಾರತದ ಅಭಿವೃದ್ಧಿಯ ಹೊಸ ಮಂತ್ರವಾಗಿದೆ. ಕಲಬುರಗಿ ಮಹಿಳೆಯರು ಆತ್ಮನಿರ್ಭರ ಅಭಿಯಾನದಡಿ ಜೋಳದ ರೊಟ್ಟಿಯನ್ನು (Jowar Roti) ಒಂದು ಬ್ರ್ಯಾಂಡ್ ಆಗಿ ರೂಪಿಸಿದ್ದಾರೆ ಎಂದು ಹೇಳಿದ್ದಾರೆ.
ಆ ಮಹಿಳೆಯರು ಸ್ವಸಹಾಯ ಸಂಘದ ಮೂಲಕ ಪ್ರತಿನಿತ್ಯ 3 ಸಾವಿರ ರೊಟ್ಟಿ ತಯಾರಿಸುತ್ತಾರೆ. ಈ ರೊಟ್ಟಿ ಕೇವಲ ಗ್ರಾಮಗಳಿಗೆ ಮಾತ್ರ ಸೀಮಿತವಾಗಿಲ್ಲ. ಬೆಂಗಳೂರಿನಲ್ಲಿ ವಿಶೇಷ ಮಳಿಗೆ ತೆರೆದಿದ್ದು, ಆನ್ಲೈನ್ ಮೂಲಕ ಆರ್ಡರ್ ಬರುತ್ತವೆ. ಇದೇ ಆತ್ಮನಿರ್ಭರ ಪ್ರತೀಕ ಎಂದು ಪ್ರಧಾನಿ ಹೇಳಿದ್ದಾರೆ.