ರಾಜ್ಯದಲ್ಲಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪವನ್ನು ವಿರೋಧಿಸಿ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾ ಪಂಚಾಯತ್ ಕಚೇರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.