ಗದಗ: ರೈತರಿಗೆ ಯೂರಿಯಾ ಗೊಬ್ಬರ ಪೂರೈಸದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಮುಂದುವರೆದಿದೆ.
ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದ ಬಳಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ಪಾಲಾ-ಗದಗ-ಬದಾಮಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ರೈತ ವಿರೋಧಿ ಕಾಂಗ್ರೆಸ್ ಸರ್ಕಾರವೆಂದು ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಹಾಗೂ ಕಾನೂನು ಸಚಿವ ಎಚ್ ಕೆ ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರೈತ ಮೋರ್ಚಾ, ಮಹಿಳಾ ಮೋರ್ಚಾ ಕಾರ್ಯಕರ್ತರು ಭಾಗಿಯಾಗಿದ್ದರು.