ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ಬಸ್ ನಿಲ್ಲಿಸುವಂತೆ ರಸ್ತೆಗೆ ಅಡ್ಡಲಾಗಿ ಕುಳಿತು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಸ್ಥಳೀಯರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕಮಗಳೂರು – ಬೇಲೂರು ಹೆದ್ದಾರಿಯ ಮುಗುಳುವಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕೆಎಸ್ ಆರಿಟಿ ಬಸ್ ನಿಲುಗಡೆ ಮಾಡುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ರಸ್ತೆಗೆ ಅಡ್ಡ ಕೂತು ನೂರಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಚಿಕ್ಕಮಗಳೂರು ತಹಸೀಲ್ದಾರ್ ರೇಷ್ಮಾ ಭೇಟಿ ನೀಡಿ ಮನವೊಲಿಸಲು ಯತ್ನಿಸಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.