ಹಾಸನ: ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಷಣ್ಮುಖ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
ಅರಣ್ಯ ಸಚಿವರು ಸ್ಥಳಕ್ಕೆ ಬರುವಂತೆ ಒತ್ತಾಯಿಸಿ ಕುಟುಂಬ ಸದಸ್ಯರು ಹಾಗು ಸ್ಥಳೀಯರ ಪ್ರತಿಭಟನೆ ನಡೆಸಿದ್ದಾರೆ. ಆನಂತರ ಹೋರಾಟಗಾರರ ಮನವೊಲಿಸಲು ಸಂಸದ ಶ್ರೇಯಸ್ ಪಟೇಲ್ ಯಶಸ್ವಿಯಾಗಿದ್ದಾರೆ. ಸತತ ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿ ಮನವೊಲಿಕೆ ನಡೆಸಲಾಗಿದೆ. ಪುಂಡಾನೆಗಳ ಸೆರೆಗೆ ಕಾರ್ಯಾಚರಣೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಶೀಘ್ರವಾಗಿ ಹಾಸನದಲ್ಲಿಯೇ ಸಿಎಂ ಹಾಗು ಅರಣ್ಯ ಸಚಿವರ ನೇತೃತ್ವದಲ್ಲಿ ಸಭೆ ನಡೆಸುವ ಕುರಿತು ಭರವಸೆ ನೀಡಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬೈಕೆರೆಯಲ್ಲಿ ಈ ಘಟನೆ ನಡೆದಿತ್ತು. ಸಕಲೇಶಪುರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.