ಮಂಗಳೂರು: ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಯಾತ್ರೆಯ ವೇಳೆ ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಯುವಕರು ದಾಂಧಲೆ ಎಬ್ಬಿಸಿದ್ದಾರೆ. ಶವ ಮೆರವಣಿಗೆಗೂ ಮುನ್ನ ಮೆರವಣಿಗೆ ಸಾಗುವ ರಸ್ತೆಯುದ್ದಕ್ಕೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಹಿಂದೂ ವರ್ತಕರ ಅಂಗಡಿಗಳನ್ನೇ ಟಾರ್ಗೆಟ್ ಮಾಡಿ ದಾಂಧಲೆ ಮಾಡಿದ್ದಾರೆ. ತುಂಬೆ ಬಳಿಯ ಅಲ್ಯುಮಿನಿಯಂ ಅಂಗಡಿಯನ್ನು ಬಲವಂತವಾಗಿ ಬಂದ್ ಮಾಡಿಸಿದ್ದಾರೆ. ಕಾರ್ಮಿಕನ ಮೇಲೆ ಹಲ್ಲೆಗೆ ಮುಂದಾಗಿ ಶಟರ್ ಎಳೆದಿದ್ದಾರೆ.
ಆಗ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಮುಸ್ಲಿಂ ಯುವಕರು ದಾಂಧಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.