ಕಲಬುರಗಿ : ಉತ್ತರ ಕರ್ನಾಟಕದಲ್ಲಿ ಬಾರಿ ಮಳೆ ಹಾಗೂ ಪ್ರವಾಹ ಹಿನ್ನಲೆಯಲ್ಲಿ ಸರ್ಕಾರ ಪರಿಹಾರ ನೀಡಿ ಎಂದು ಕಲಬುರಗಿ ಜಿಲ್ಲೆಯಲ್ಲಿ ರೈತ ಸಂಘಟನಕಾರು ಕೇಂದ್ರ ಬಸ್ ನಿಲ್ದಾಣಕ್ಕೆ ಮತ್ತಿಗೆ ಹಾಕಿದ್ದಾರೆ.

ರೈತ ಸಂಘಟನೆಗಳು ಸೇರಿದಂತೆ 15ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಬೆಳ್ಳಂ ಬೆಳಿಗ್ಗೆ ಕೇಂದ್ರಿಯ ಬಸ್ ನಿಲ್ದಾಣಕ್ಕೆ ಹೋರಾಟಗಾರರು ಮುತ್ತಿಗೆ ಹಾಕಿದ್ದಾರೆ. ಬಸ್ ಸಂಚಾರ ಬಂದ್ ಮಾಡಿಸಿ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬೆಳಗ್ಗೆ 9 ಗಂಟೆಗೆ ಜಗತ್ ವೃತದಲ್ಲಿ ಹೋರಾಟಗಾರರು ಪ್ರತಿಭಟನೆ ಆರಂಬಿಸಿದ್ದು, ಮಧ್ಯಾಹ್ನ 1 ಗಂಟೆ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಮೂಲಕ ಹಸಿಬರ ಘೋಷಣೆಗೆ ಸರ್ಕಾರದ ಮೇಲೆ ಒತ್ತಡ ಹಾಕಲಿದ್ದಾರೆ.