ನವದೆಹಲಿ: ರೈಲ್ವೆ ಸಚಿವಾಲಯವು (Indian Railways) ತತ್ಕಾಲ್ ಟಿಕೆಟ್ ಬುಕಿಂಗ್ ನಿಯಮಯದಲ್ಲಿ (Tatkal Train Ticket Booking) ಬದಲಾವಣೆ ತಂದಿದೆ. ಈ ಹೊಸ ಆದೇಶ ಜುಲೈ 1 ರಿಂದ ಜಾರಿಗೆ ಬರಲಿದೆ.
ಇನ್ನು ಮುಂದೆ ತತ್ಕಾಲ್ ಟಿಕೆಟ್ ಬುಕಿಂಗ್ ಮಾಡಬೇಕಾದರೆ IRCTC ಅಧಿಕೃತ ವೆಬ್ಸೈಟ್ ಅಥವಾ ಆ್ಯಪ್ ಗೆ ಆಧಾರ್ ಲಿಂಕ್ ಆಗಿರುವುದನ್ನು ಕಡ್ಡಾಯಗೊಳಿಸಿ ಆದೇಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಆಧಾರ್ ಲಿಂಕ್ ಹೊಂದಿರುವ ಬಳಕೆದಾರರು ಮಾತ್ರ ತತ್ಕಲ್ ಟಿಕೆಟ್ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ.
ತತ್ಕಾಲ್ ಟಿಕೆಟ್ಗಳನ್ನು ಆಧಾರ್ ಲಿಂಕ್ ಹೊಂದಿರುವ ಬಳಕೆದಾರರು ಮಾತ್ರ ಐಆರ್ ಟಿಸಿ ವೆಬ್ಸೈಟ್ ಅಥವಾ ಅದರ ಆ್ಯಪ್ ಮೂಲಕ ಬುಕ್ ಮಾಡಬಹುದು. ಅಲ್ಲದೇ, ತತ್ಕಾಲ್ ಗೆ ಆಧಾರ್ ಆಧಾರಿತ OTP ದೃಢೀಕರಣ ಕಡ್ಡಾಯಗೊಳಿಸಲಾಗುತ್ತದೆ ಎಂದು ತಿಳಿಸಿದೆ.
ಭಾರತೀಯ ರೈಲ್ವೆಯ ಅಧಿಕೃತ ಏಜೆಂಟ್ಗಳಿಗೆ ತತ್ಕಾಲ್ ಟಿಕೆಟ್ ಆರಂಭವಾಗುವ ಮೊದಲ 30 ನಿಮಿಷದಲ್ಲಿ ಬುಕಿಂಗ್ ಮಾಡುವ ಅವಕಾಶವನ್ನು ನಿರ್ಬಂಧಿಸಿದೆ.