ಬೆಂಗಳೂರು: ಇಂದು ಮತ್ತು ನಾಳೆ ಇಡೀ ರಾಜ್ಯದ ತುಂಬೆಲ್ಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉಳಿದಂತೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.