ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ (Rain)ಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪಗೊಂಡಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರ ಕಲಬುರಗಿಯಲ್ಲಿ 38.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.