ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ(Rain)ಯಾಗುತ್ತಿದೆ. ಬಿರು ಬಿಸಿಲಿನ ಮಧ್ಯೆಯೂ ಹಲವೆಡೆ ಮಳೆ ತಂಪು ನೀಡುತ್ತಿದ್ದರೆ, ಹಲವೆಡೆ ಅಸ್ತವ್ಯಸ್ಥ ಸೃಷ್ಟಿಸುತ್ತಿದೆ. ಈ ಮಧ್ಯೆ ಹವಾಮಾನ ಇಲಾಖೆ ಮತ್ತೆ ಮಳೆಯ ಮುನ್ಸೂಚನೆ ನೀಡಿದೆ.
ಏಪ್ರಿಲ್ 13ರ ಬಳಿಕ ಮಳೆಯ ಪ್ರಮಾಣ ರಾಜ್ಯದಲ್ಲಿ ಹೆಚ್ಚಾಗಲಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಹಾಗೂ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 13ರ ಬಳಿಕ ಕೋಲಾರ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ,ಬೀದರ್ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಸಿಲಿಕಾನ್ ಸಿಟಿಗೆ ಎರಡು ದಿನಗಳ ನಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ಕಲಬುರಗಿಯಲ್ಲಿ 42.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.