ಜೀನಿ ಕಂಪನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದ್ದು, ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಶುಕ್ರವಾರ ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜೀನಿ ಕಂಪನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಅತ್ಯಾಚಾರ ಪ್ರಯತ್ನ, ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆಯ ಆರೋಪನ್ನು ಮಹಿಳೆ ಮಾಡಿದ್ದಾರೆ. ಈ ಕುರಿತು ಬುಧವಾರ ರಾತ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ದಿಲೀಪ್ ಕುಮಾರ್ ನಾಪತ್ತೆಯಾಗಿದ್ದಾರೆ. ಈ ಕುರಿತು ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.