ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸಾಲು ಸಾಲು ಹಿಟ್ ಸಿನಿಮಾಗಳನ್ನು ಕೊಟ್ಟ ನಟಿ. ಇದೀಗ ಎರಡು ಮೂರು ಚಿತ್ರರಂಗದಲ್ಲಿ ಫುಲ್ ಬಿಝಿಯಾಗಿದ್ದಾರೆ.
ರಶ್ಮಿಕಾ ನಟನೆಯ ಹೊಸ ಸಿನಿಮಾಗಳು ತೆರೆಗೆ ಬರಲು ಈಗಾಗಲೇ ಸಜ್ಜಾಗಿವೆ. ಹೊಸ ಅವತಾರದಲ್ಲಿ ರಶ್ಮಿಕಾ ಮಂದಣ್ಣ,. ಮೊದಲ ಬಾರಿಗೆ ಮಹಿಳಾ ಪ್ರಧಾನ ಸಿನಿಮಾದಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಮೈಸಾ ಚಿತ್ರದಲ್ಲಿ ರಶ್ಮಿಕಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೈಸಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಐದು ಭಾಷೆಯಲ್ಲಿ ನಿರ್ಮಾಣವಾಗಲಿದೆ . ಈ ಸಿನಿಮಾಗೆ ರವೀಂದ್ರ ಪುಲ್ಲೇ ಆಕ್ಷನ್ ಕಟ್ ಹೇಳ್ತಾ ಇದ್ದು, ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಒಟ್ಟಾರೆ ಈ ಸಿನಿಮಾ ರಶ್ಮಿಕಾ ಸಿನಿ ಕೆರಿಯರ್ ನಲ್ಲಿ ಹೊಸ ಮೈಲಿಗಲ್ಲಾಗುತ್ತಾ ಕಾದುನೋಡಬೇಕು.