18 ವರ್ಷಗಳ ಆರ್ ಸಿಬಿ ಅಭಿಮಾನಿಗಳ ತಪಸ್ಸಿಗೆ ಕೊನೆಗೂ ಜಯ ಸಿಕ್ಕಿದ್ದು, ಐಪಿಎಲ್ ಟ್ರೋಫಿ ಹೊತ್ತು ಆರ್ ಸಿಬಿ ಆಟಗಾರರು ತವರಿಗೆ ಮರಳಿದ್ದಾರೆ.
ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ.
ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ತುಂಬಿದ್ದಾರೆ. ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದಾರೆ. ರಸ್ತೆಯುದ್ದಕ್ಕೂ ನಿಂತು ತಂಡದ ಸದಸ್ಯರಿಗೆ ಜೈಕಾರ ಕೂಗಿದ್ದಾರೆ. ಪರಿಸ್ಥಿತಿ ತಿಳಿಗೊಳಿಸಲು ರಸ್ತೆಯುದ್ದಕ್ಕೂ ಪೊಲೀಸರು ಹರಸಾಹಸ ಪಟ್ಟಿದ್ದಾರೆ.