ಬೆಂಗಳೂರು: ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS CRE Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 3,501 ಪೋಸ್ಟ್ ಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜೂನಿಯರ್ ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್, ಡ್ರೈವರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಇದು ತಾಂತ್ರಿಕ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಪಡೆಯಲು ಒಳ್ಳೆಯ ಅವಕಾಶವಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ಜೂನಿಯರ್ ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್, ಡ್ರೈವರ್
ಒಟ್ಟು ಹುದ್ದೆ: 3501
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 31
10ನೇ ತರಗತಿ, 12ನೇ ತರಗತಿ, ITI, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, BCA, B.Sc, BE ಅಥವಾ B.Tech, BASLP, ಪದವಿ, M.Sc, MA, Ph.D ಕೋರ್ಸ್ ಗಳನ್ನು ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ದೇಶಾದ್ಯಂತ ಇರುವ ಏಮ್ಸ್ ಸಂಸ್ಥೆಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅಧಿಕೃತ ವೆಬ್ಸೈಟ್: https://aiimsexams.ac.in/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. SC/ST/EWS ಅಭ್ಯರ್ಥಿಗಳಿಗೆ: 2,400 ರೂಪಾಯಿ ಅರ್ಜಿ ಶುಲ್ಕವಿದೆ. ಜನರಲ್ ಹಾಗೂ ಒಬಿಸಿಯವರಿಗೆ 3 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ ನೇಮಕಾತಿ ಹೊಂದಿದವರಿಗೆ 92,300 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ ಪರೀಕ್ಷೆ, ದಾಖಲೆ ಪರಿಶೀಲನೆ. ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಳ್ಳಲಾಗುತ್ತದೆ.



















