ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲೂ ಮೇ 26 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಧಾರವಾಡ, ಹಾವೇರಿ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗದಗ,ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.