ನಮ್ಮ ಮೆಟ್ರೋದಲ್ಲಿ ನಂದಿನಿ ಮಳಿಗೆ ಸ್ಥಾಪಿಸಲು ಅವಕಾಶ ನೀಡುವಂತೆ ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಮೆಟ್ರೋ ಎಂಡಿ ಮಹೇಶ್ವರ್ ರಾವ್ ಗೆ ಮನವಿ ಮಾಡಿದ್ದಾರೆ.
ಈ ಕುರಿತು ಮೆಟ್ರೋ ಎಂಡಿ ಮಹೇಶ್ವರ್ ರಾವ್ ಗೆ ಮನವಿ ಸಲ್ಲಿಸಿದ್ದಾರೆ. ನಗರದ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗಳಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ನಂದಿನಿ ಬ್ರ್ಯಾಂಡ್ ನ್ನು ಮತ್ತಷ್ಟು ವಿಸ್ತರಿಸಲು ಇದು ಸಹಕಾರಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಮೆಟ್ರೋ ನಿಲ್ದಾಣದಲ್ಲಿ 10*10 ಜಾಗವನ್ನು ನಂದಿನಿಗೆ ಮೀಸಲಿಡುವಂತೆ ಕೋರಲಾಗಿದೆ.