ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು (Pahalgam Terrorists attack) ಆರೆಸ್ಸೆಸ್ (RSS) ತೀವ್ರವಾಗಿ ಖಂಡಿಸಿದೆ.
ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಟ್ವೀಟ್ ಮಾಡಿರುವ ಆರೆಸ್ಸೆಸ್,” ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ಭಯೋತ್ಪಾದಕ ದಾಳಿ ಅತ್ಯಂತ ಖಂಡನೀಯ ಮತ್ತು ದುಃಖಕರ. ಘಟನೆಯಲ್ಲಿ ಮಡಿದ ಎಲ್ಲರಿಗೂ ನಾವು ಗೌರವ ಸಲ್ಲಿಸುತ್ತೇವೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳುವಂತಾಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಆರೆಸ್ಸೆಸ್ ಬರೆದುಕೊಂಡಿದೆ.
ದಾಳಿಯು ದೇಶದ ಏಕತೆ ಮತ್ತು ಸಮಗ್ರತೆಯ ಮೇಲೆ ದಾಳಿ ಮಾಡುವ ಪ್ರಯತ್ನವಾಗಿದೆ. ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಈ ದಾಳಿಯನ್ನು ಖಂಡಿಸಬೇಕು. ಮೃತ ಕುಟುಂಬಗಳಿಗೆ ಸರ್ಕಾರ ಅಗತ್ಯ ಸಹಾಯ ಮಾಡಬೇಕು. ದಾಳಿಗೆ ಕಾರಣರಾದವರನ್ನು ಶಿಕ್ಷಿಸಲು ಸರ್ಕಾರ ಶೀಘ್ರದಲ್ಲೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಆರೆಸ್ಸೆಸ್ ಆಗ್ರಹಿಸಿದೆ.