ಕೋಲಾರ: ಮೂರು ಕಾರುಗಳ ಮಧ್ಯೆ ಸರಣಿ ಅಪಘಾತ (Series Accident) ಸಂಭವಿಸಿದ ಘಟನೆ ನಡೆದಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕೋಲಾರ (Kolara) ತಾಲೂಕಿನ ನರಸಾಪುರ ಹತ್ತಿರದ ಬೆಳ್ಳೂರು ಬ್ರಿಡ್ಜ್ ನಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಆರ್.ಟಿ ನಗರದ (Bengaluru RT Nagara) ನಿವಾಸಿ ಅಫ್ರೋಜ್ ಸಾವನ್ನಪ್ಪಿರುವ ದುರ್ದೈವಿ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂಡಿಕಾ, ಫಾರ್ಚುನರ್ ಹಾಗೂ ಪೊಲೋ ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ. ವಾಹನಗಳು ಅಪಘಾತದ ತೀವ್ರತೆಗೆ ನುಜ್ಜುಗುಜ್ಜಾಗಿವೆ.
ಅಫ್ರೂಜ್ ಮುಳಬಾಗಿಲಿನ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ತೆರಳಿದ್ದರು ಎನ್ನಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ವೇಮಗಲ್ ಠಾಣೆಯ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.