ಬೆಂಗಳೂರು: ನಟ ಶಿವರಾಜಕುಮಾರ್ ಇತ್ತೀಚೆಗಷ್ಟೇ ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆ ಮುಗಿಸಿಕೊಂಡು ಮರಳಿ ರಾಜ್ಯಕ್ಕೆ ಆಗಮಿಸಿದ್ದಾರೆ. ಅವರು ಆಗಮಿಸುತ್ತಿದ್ದಂತೆ ಗಣ್ಯರು, ಸೆಲೆಬ್ರಿಟಿಗಳು ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಈ ಮಧ್ಯೆ ಅವರು ಶಿರಸಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಅವರಿಗೆ ವಿಶ್ರಾಂತಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಶಿರಸಿಗೆ ತೆರಳಿ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಶಿವಣ್ಣ ಸದ್ಯ ಸಂಪೂರ್ಣ ಗುಣಮುಖರಾಗಿದ್ದು, ಮಾರ್ಚ್ನಿಂದ ಮತ್ತೆ ಸಿನಿಮಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಅವರಿಗೆ ಇನ್ನೂ ಕೆಲವು ದಿನ ವಿಶ್ರಾಂತಿ ಬೇಕು. ಹೀಗಾಗಿ ಅವರು ಕರಾವಳಿ ಪ್ರದೇಶಕ್ಕೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಶಿವಣ್ಣ ತಮ್ಮ ಸಂಬಂಧಿ, ಶಾಸಕ ಭೀಮಣ್ಣ ಒಡೆತನದ ಶಿರಸಿಯ ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾರೆ. ಪತ್ನಿ ಗೀತಾ ಅವರೊಂದಿಗೆ ಹೋಟೆಲ್ ನಲ್ಲಿ ಉಳಿದುಕೊಂಡು ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೇ, ಭೇಟಿಗೆ ಯಾರಿಗೂ ಅವಕಾಶ ನೀಡಿಲ್ಲ.