ಜಿಲ್ಲಾಧಿಕಾರಿಗಳು ಹಾಗೂ ಸಿಇಓ ಸಭೆಯಲ್ಲಿ ಇಂದು ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.
ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ? ಎಂದು ಪ್ರಶ್ನಿಸಿದ್ದಾರೆ.
ಸರಿಯಾಗಿ ನಿಗಾ ವಹಿಸಿ, ವರದಿ ನೀಡದ PDO ಗಳು ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು. ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು.