ಬೆಂಗಳೂರು : ಕರ್ನೂಲ್ ಬಸ್ ದುರಂತದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್‌ಗಳಲ್ಲಿ ಕೆಲ ನಿಯಮಗಳನ್ನ ಕಡ್ಡಾಯಗೊಳಿಸಲು ಸೂಚಿಸಿದ್ದಾರೆ.

ಪ್ರಮುಖವಾಗಿ ಬಸ್‌ಗಳಲ್ಲಿ ಬೆಂಕಿ ಸ್ಪರ್ಶಕ್ಕೆ ಸರಳವಾಗಿ ಉರಿಯುವ ವಸ್ತುಗಳ ಸಾಗಣಿಕೆಗೆ ಬ್ರೇಕ್ ಹಾಕಬೇಕು. ಬಸ್‌ಗಳಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನ ತೆಗೆದುಕೊಂಡು ಹೋಗಬಾರದು. ಎಲ್ಲಾ ಎಸಿ ಬಸ್‌ಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿ, ಇದರಿಂದ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಬಳಸಲು ಸಹಾಯವಾಗಲಿದೆ. ಅಲ್ಲದೇ ಲಗೇಜ್ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ನೀಡಬಾರದು. ಬಸ್ಸುಗಳ ನವೀಕರಣ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ. ಜೊತೆಗೆ ಬಸ್ಸುಗಳಲ್ಲಿನ ಸುರಕ್ಷತಾ ಆಡಿಟ್ ಪರಿಶೀಲನೆಗೆ ತಂಡಗಳನ್ನು ರಚಿಸಿ, ಬಸ್ ಗಳಲ್ಲಿ ಯಾವುದೇ ನೂನ್ಯತೆ ಕಂಡುಬಂದರೂ ಕಠಿಣ ಕ್ರಮಕ್ಕೆ ಆದೇಶಕ್ಕೆ ಸೂಚಿಸಿದ್ದಾರೆ.
ಈ ಮಧ್ಯೆ ನಿನ್ನೆಯಿಂದ ಹಾಗೂ ಇಂದು ರಾಜ್ಯ ಸಾರಿಗೆ ಅಧಿಕಾರಿಗಳು ಹಾಗೂ ಟ್ರಾಫಿಕ್ ಪೊಲೀಸರು, ಬೆಂಗಳೂರಿನಿಂದ ಹೋಗುವಂತ ಎಲ್ಲಾ ಬಸ್ಸುಗಳನ್ನ ಪರಿಶೀಲನೆಗೆ ಮುಂದಾಗಿದ್ದಾರೆ. ಮೆಜೆಸ್ಟಿಕ್‌ನಲ್ಲಿ ಖಾಸಗಿ ಎಸಿ ಬಸ್‌ಗಳ ಪರಿಶೀಲನೆ ನಡೆಸಿ, ಡ್ರೈವರ್ ಲೈಸೆನ್ಸ್, ಬಸ್ ಗಳ ದಾಖಲೆ ಚೆಕ್ ಮಾಡುತ್ತಿದ್ದಾರೆ.
ಕರ್ನೂಲು ಬಸ್ ದುರಂತ |
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಅಕ್ಟೋಬರ್ 24ರಂದು ನಸುಕಿನ ಜಾವ ಆಂಧ್ರಪ್ರದೇಶದ ಕರ್ನೂಲು ಬಳಿ ಸುಟ್ಟು ಭಸ್ಮವಾಗಿತ್ತು. ಬೈಕ್ಗೆ ಡಿಕ್ಕಿಯಾದ ಬಳಿಕ ಏಕಾಏಕಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಬಸ್ಗೆ ವಾಪಿಸಿತ್ತು. ಬಸ್ನಲ್ಲಿಪ್ರಯಾಣಿಸುತ್ತಿದ್ದ ಒಟ್ಟು 46 ಮಂದಿ ಪ್ರಯಾಣಿಕರ ಪೈಕಿ, 19 ಪ್ರಯಾಣಿಕರು ಮತ್ತು ಬೈಕ್ ಸವಾರ ಸಜೀವ ದಹನವಾಗಿದ್ದರು.
ಇದನ್ನೂ ಓದಿ : ಸಿಡ್ನಿ ಸ್ಟೇಡಿಯಂನಲ್ಲಿ ದೇಶಪ್ರೇಮ ಮೆರೆದ ವಿರಾಟ್ ಕೊಹ್ಲಿ.. ವಿಡಿಯೋ ವೈರಲ್!



















