ಬೆಂಗಳೂರು: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ಗಡಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ದೇಶಾದ್ಯಂತ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಲು ಸೂಚಿಸಿದೆ.

ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಕಾನೂನು ಸುವ್ಯವಸ್ಥೆಯ ಮೇಲೆ ತೀವ್ರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಐಟಿ ಬಿಟಿ ಸಚಿವ ಪ್ರಿಯಾಂಕ ಖರ್ಗೆ, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.

ಹಿರಿಯ ಪೊಲೀಸ್ ಅಧಿಕಾರಿಗಳು, ಡಿಸಿಗಳು, ಮಹಾನಗರ ಕಮಿಷನರ್ ಗಳು, ಎಸ್ಪಿಗಳ ಜೊತೆ ವಿಧಾನಸೌಧದಿಂದ ವೀಡಿಯೋ ಕಾನ್ಪೆರೆನ್ಸ್ ಮೂಲಕ ಚರ್ಚೆಯನ್ನು ನಡೆಸಲಾಗಿದೆ. ಇದೇ ವೇಳೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷದ ಬಳಿಕ ಜಿಲ್ಲೆಗಳಲ್ಲಿರುವ ಪರಿಸ್ಥಿತಿಯ ಬಗ್ಗೆ ಸಿಎಂರಿಂದ ಅವಲೋಕಿಸಲಾಗಿದೆ.