ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. 14 ವರ್ಷದ ಶಮಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಾನು ಧರಿಸಿದ್ದ ಚೂಡಿದಾರದ ವೇಲ್ ನಿಂದ ಬಾಲಕಿ ನೇಣು ಬಿಗಿದುಕೊಂಡಿದ್ದಾಳೆ. ವಸತಿ ಶಾಲೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶಮಿತಾ ಮೂಲತಃ ಕೊಪ್ಪ ತಾಲೂಕಿನ ಬೊಮ್ಲಾಪುರ ಸಮೀಪದ ಹೊಕ್ಕಳಿಕೆ ಗ್ರಾಮದವಳು ಎನ್ನಲಾಗಿದೆ. ಶಮಿತಾ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕೊಪ್ಪ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.