ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕ ಮನೆ ಮಾಡುತ್ತಿದೆ. ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೃದಯಾಘಾತ ಹೆಚ್ಚು ವರದಿಯಾಗುತ್ತಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಪ್ರತಿ ದಿನ ಎರಡ್ಮೂರು ಜನ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದು ದೊಡ್ಡ ಆತಂಕಕ್ಕೆ ಕಾರಣವಾಗುತ್ತಿದೆ. ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೊಬ್ಬರು ಮೆಡಿಕಲ್ ಶಾಪ್ ಗೆ ಮಾತ್ರೆ ಖದೀಸಲು ಬಂದಾಗಲೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ವಿಶ್ವನಾಥ್(60) ಹೃದಯಾಘಾತಕ್ಕೆ ಬಲಿಯಾದ ವ್ಯಕ್ತಿ ಎನ್ನಲಾಗಿದೆ. ನಗರದ ದೀಪ ನರ್ಸಿಂಗ್ ಹೋಂ ಬಳಿ ಮಾತ್ರೆ ಖರೀದಿಸುವಾಗಲೇ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಯಲ್ಲಿ ಸೆರೆಯಾಗಿದೆ. ಈ ಮೂಲಕ ಚಿಕ್ಕಮಗಳೂರಿನಲ್ಲಿ 2 ತಿಂಗಳಲ್ಲಿ 13 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎನ್ನಲಾಗಿದೆ.