ವಿವಿಧ ಬೇಡಿಕೆ ಈಡೇರಿಸುವಂತೆ ಲಾರಿ ಮಾಲೀಕರ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಹಾಸನದಲ್ಲಿ ಲಾರಿ ಮಾಲೀಕರು ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಲಾರಿಗಳು ಸಂಚಾರ ಮಾಡದ ಹಿನ್ನೆಲೆಯಲ್ಲಿ ಹಾಸನದ ಗೂಡ್ಸ್ ಶೆಡ್ ನಲ್ಲಿ ನೂರಾರು ಲಾರಿಗಳು ನಿಂತಿವೆ. ಡೀಸೆಲ್, ಟ್ಯಾಕ್ಸ್, ಟೋಲ್, ಆರ್ಟಿಓ ಫೈನ್ ಸೇರಿದಂತೆ ಹಲವು ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ಮುಷ್ಕರ ನಡೆಯುತ್ತಿದೆ.
ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಬಾಡಿಗೆ ಮಾತ್ರ ಏರಿಕೆಯಾಗಿಲ್ಲ. ಹೀಗಾಗಿ ಲಾರಿ ಮಾಲೀಕರ ಬದುಕು ಬೀದಿಗೆ ಬಂದಿದೆ. ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕೆಂದು ಆಗ್ರಹಿಸಲಾಗಿದೆ. ಇಲ್ಲದಿದ್ದರೆ ಮುಷ್ಕರ ಮುಂದುವರೆಸುವ ಎಚ್ಚರಿಕೆ ನೀಡಲಾಗಿದೆ.