ಹುಬ್ಬಳ್ಳಿ: ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ ನಗರದಲ್ಲಿನ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಂಗಮ್ಮ ಸಾವನ್ನಪ್ಪಿರುವ ದುರ್ದೈವ ಶಿಕ್ಷಕಿ. ಜು.24 ರಂದು ಹುಬ್ಬಳ್ಳಿಯ ಶಕ್ತಿನಗರದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿಕೊಂಡ ಪರಿಣಾಮ, ಗಂಗಮ್ಮ, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು. ಆದರೆ, ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದರು.
ಹೀಗಾಗಿ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನುಳಿದ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ. ಈ ಕುರಿತು ಹುಬ್ಬಳ್ಳಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.