ಬೆಂಗಳೂರು : ಹೊಸದಾಗಿ ಆರಂಭಗೊಂಡಿರುವ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ದೋಷ ಎದುರಾಗಿದೆ.
ಆ.10ರಂದು ಪ್ರಧಾನಿ ಮೋದಿ ಚಾಲನೆ ನೀಡಿರುವ ಹಳದಿ ಮಾರ್ಗದ ಮೆಟ್ರೋ ತಾಂತ್ರಿಕ ಸಮಸ್ಯೆಯಿಂದ ಪ್ರತಿ 25 ನಿಮಿಷಕ್ಕೆ ಒಂದರಂತೆ ರೈಲುಗಳು ಚಲಿಸುತ್ತಿವೆ. ಇದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ಬಿಎಂಆರ್‌ಸಿಎಲ್ ಮನವಿ ಮಾಡಿದೆ.
ಇದೀಗ 19.15 ಕಿ.ಮೀ. ಉದ್ದದ ಹಳದಿ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳಿದ್ದು 3 ಮೆಟ್ರೋ ಲೈನ್‌ಗೆ ಸಂಪರ್ಕ ಕಲ್ಪಿಸುತ್ತದೆ. ಒಟ್ಟು ನಾಲ್ಕು ರೈಲುಗಳು ಈಗ ಸಂಚಾರ ನಡೆಸುತ್ತಿದ್ದು, ಶೀಘ್ರವೇ 5ನೇ ರೈಲು ಸೇರ್ಪಡೆಯಾಗುವ ಸಾಧ್ಯತೆಯಿದೆ.