ಬೆಂಗಳೂರು: ಕೇಂದ್ರ ಸರ್ಕಾರದ ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ 15 ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕನ್ಸಲ್ಟಂಟ್ ಹಾಗೂ ಅಸೋಸಿಯೇಟ್ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಏಪ್ರಿಲ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ನೇಮಕಾತಿ ಸಂಸ್ಥೆ: ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 15
ಮಾಸಿಕ ವೇತನ: 35-75 ಸಾವಿರ ರೂ.
ಹಿಮಾಚಲ ಪ್ರದೇಶದಲ್ಲಿ ಕೈಗೊಳ್ಳುತ್ತಿರುವ ಭಾರತ್ ನೆಟ್ ಯೋಜನೆಯ ಭಾಗವಾಗಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರು ಧರ್ಮಶಾಲಾ, ಸೋಲನ್, ಹಮೀರ್ ಪುರ, ಮಂಡಿ ಹಾಗೂ ಶಿಮ್ಲಾದಲ್ಲಿ ಕೆಲಸ ಮಾಡಬೇಕಾಗುತ್ತದೆ. ಕನ್ಸಲ್ಟಂಟ್ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕ 75 ಸಾವಿರ ರೂಪಾಯಿ ಹಾಗೂ ಅಸಿಸ್ಟಂಟ್ ಕನ್ಸಲ್ಟಂಟ್ ಹುದ್ದೆಗಳಿಗೆ ಆಯ್ಕೆಯಾದವರಿಗೆ 35 ಸಾವಿರ ರೂ. ವೇತನ ನೀಡಲಾಗುತ್ತದೆ.
ಒಂದು ವರ್ಷದ ಅವಧಿಗಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಗರಿಷ್ಠ 65 ವರ್ಷದ ವಯೋಮಿತಿ ನಿಗದಿಪಡಿಸಲಾಗಿದೆ. https://www.itiltd.in/careers ವಿಳಾಸಕ್ಕೆ ಭೇಟಿ ನೀಡುವ ಮೂಲಕ ಹೆಚ್ಚಿನ ಮಾಹಿತಿ ಪಡೆಯುವ ಜತೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕನ್ಸಲ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ 10 ವರ್ಷ ಸೇವೆ ಸಲ್ಲಿಸಿದ ಅನುಭವ ಇರಬೇಕು ಹಾಗೂ ಅಸಿಸ್ಟಂಟ್ ಕನ್ಸಲ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ 7 ವರ್ಷದ ಕಾರ್ಯಾನುಭವ ಇರಬೇಕು ಎಂದು ತಿಳಿಸಲಾಗಿದೆ.