ಬಾಗಲಕೋಟೆ: ತಡರಾತ್ರಿ ಕ್ಯಾಂಟರ್ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಬಾದಾಮಿ ತಾಲೂಕಿನ ಹೂಲಗೇರಿ ಬಳಿ ನಡೆದಿದೆ.
ಹುಬ್ಬಳ್ಳಿ ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್‌ಗೆ ಕ್ಯಾಂಟರ್ ಡಿಕ್ಕಿಯಾಗಿ ಟ್ರ್ಯಾಕ್ಟರ್‌ನಲ್ಲಿದ್ದ ಇಬ್ಬರು, ಟ್ಯಾಂಕರ್‌ನಲ್ಲಿದ್ದ ಓರ್ವ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹುಲ್ಲಿಕೇರಿ ಗ್ರಾಮದ 55 ವರ್ಷದ ವೆಂಕಪ್ಪ ತೋಗುಣಸಿ, 54 ವರ್ಷದ ಗದ್ದೆಪ್ಪ ಹೊಸಮನಿ, ನಂದಿಕೇಶ್ವರ ಗ್ರಾಮದ ನಿವಾಸಿ ಸಂಜೀವ್(32) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಕೆರೂರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.