ಬೆಂಗಳೂರು: ಸಮೀಪದ ಡಾಬಸ್ ಪೇಟೆ ಹತ್ತಿರ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿಯ ಅಂಚೆಮನೆ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಗೋಪಾಲ್(60), ಶಶಿಕಲಾ (55), ದೀಪಾ (30) ಮೃತ ದುರ್ದೈವಿಗಳು ಎನ್ನಲಾಗಿದೆ. ಗೋಪಾಲ್, ಹೆಂಡತಿ ಶಶಿಕಲಾ ಹಾಗೂ ಮಗಳು ದೀಪಾ ಸೇರಿದಂತೆ ಐವರು ತುಮಕೂರು ಕಡೆ ಹೋಗುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಕಾರು ರಸ್ತೆಯ ಪಕ್ಕದ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತ ಬಳಿಕ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನುಳಿದ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವನ್ನಪ್ಪಿದವರು ಬೆಂಗಳೂರಿನ ಮಲ್ಲೇಶ್ವರಂ ನಿವಾಸಿಗಳು ಎನ್ನಲಾಗಿದೆ. ತುಮಕೂರಿನಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.