ಉಡುಪಿ: ಕೋಟೇಶ್ವರದಲ್ಲಿ ಮಾರಕಾಸ್ತ್ರಗಳೊಂದಿಗೆ ಮನೆಗೆ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ.
ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಕುಂದಾಪುರ ತಾಲೂಕಿನ ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿ ಬಳಿಯ ಮನೆಯಲ್ಲಿ ಈ ಘಟನೆ ನಡೆದಿದೆ. ಬಾಗಿಲಿನ ನೆಟ್ ಮುರಿದು ಖದೀಮರು ಒಳಗೆ ನುಗ್ಗಲು ಯತ್ನಿಸಿದ್ದಾರೆ. ಬಾಗಿಲು ಮುರಿಯುವ ಯತ್ನದಲ್ಲಿದ್ದಾಗ ಮನೆಯಲ್ಲಿದ್ದ ಮಹಿಳೆ ಎಚ್ಚರಗೊಂಡಿದ್ದಾರೆ. ಕೂಡಲೇ ಕಿರುಚಾಡಿದ್ದಾರೆ.
ಆಮೇಲೆ ಫೋನ್ ಮಾಡಲು ಮುಂದಾಗಿರುವುದನ್ನು ಗಮನಿಸಿ ಕಳ್ಳರು ಪರರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನ ನಡೆಸಿದ್ದಾರೆ. ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಕಳ್ಳರ ಕೃತ್ಯ ಸೆರೆಯಾಗಿದೆ.