ಮಲೆನಾಡು ಭಾಗದ ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಐತಿಹಾಸಿಕ ಮದಗಮಾಸೂರು ಕೆರೆ ತುಂಬಿದೆ. ಹಸಿರ ನಡುವೆ ಮೈದುಂಬಿ ಹರಿಯುತ್ತಿರುವ ಕೆರೆಗೆ ಜೀವ ಕಳೆ ಬಂದಿದ್ದು, ಪ್ರವಾಸಿಗರ ಹಾಟ್ ಸ್ಪಾಟ್ ಆಗಿ ಬದಲಾಗಿದೆ. ಮಾಯದಂತಾ ಮಳೆ ಬಂತಣ್ಣ ಎಂಬ ಜಾನಪದ ಸಾಲುಗಳ ಮೂಲಕ ಫೇಮಸ್ ಆಗಿರುವ ಈ ಕೆರೆಯನ್ನು ನೋಡಲು ಈಗ ಪ್ರವಾಸಿಗರ ದಂಡು ಹರಿದು ಬರುತ್ತಿದೆ.