ತುಮಕೂರು : ಬೇರೆಡೆ ಕೊಲೆ ಮಾಡಿ ಮೃತದೇಹವನ್ನು ತುಮಕೂರಿನಲ್ಲಿ ದುಷ್ಕರ್ಮಿಗಳು ಬಿಸಾಕಿ ಹೋಗಿರುವ ಘಟನೆಯೊಂದು ನಡೆದಿದೆ.
ತುಮಕೂರಿನ ಜಯಪುರ ಬಯಲು ಪ್ರದೇಶದಲ್ಲಿ ಶವ ಬಿಸಾಕಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ಸೋಲೂರು ಮೂಲದ ದಿಲೀಪ್ ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ದಿಲೀಪ್ ವಿವಾಹಿತ ಮಹಿಳೆ ಅಮೃತ ಎಂಬಾಕೆಯನ್ನು ಪ್ರೀತಿಸಿ ಓಡಿ ಹೋಗಿದ್ದ ಎನ್ನಲಾಗಿದೆ. ಸ್ಥಳಕ್ಕೆ ತಿಲಕ್ ಪಾರ್ಕ್ ಪೋಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಜಿಲ್ಲಾ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ನೆಲಮಂಗಲ ಬಳಿ ಹತ್ಯೆ ಮಾಡಿ. ರಾತ್ರಿ ತುಮಕೂರಿನ ಜಯಪುರ ಬಳಿ ಶವ ಎಸೆದು ಆರೋಪಿಗಳು ಎಸ್ಕೇಪ್ ಆಗಿದ್ದಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಘಟನೆ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಸ್ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.