ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಪೂರ್ವ ಮಳೆಯ ಅಬ್ಬರ ಶುರುವಾಗಿದೆ.
ಸಿಲಿಕಾನ್ ಸಿಟಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 19ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಇದೆ.
ಮೇ 21ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ವಿಪರೀತ ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಂದು ಮತ್ತು ನಾಳೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಹಲವೆಡೆ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ.