ಇಂದು ರಾಜ್ಯಾದ್ಯಂತ ಲಾರಿ ಮಾಲೀಕರು ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ಮುಷ್ಕರಕ್ಕೆ ಟ್ಯಾಕ್ಸಿ ಮಾಲೀಕರು ಹಾಗೂ ಚಾಲಕರು ಕೂಡ ಈ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ, ವಿಮಾನ ನಿಲ್ದಾಣದಲ್ಲಿ ಬಂದ್ ಗೆ ಯಾವುದೇ ಬಿಸಿ ತಟ್ಟಿಲ್ಲ.
ಕೆಂಪೇಗೌಡ ಏರ್ಪೋಟ್ ನಲ್ಲಿ ಟ್ಯಾಕ್ಸಿಗಳು ಎಂದಿನಂತೆ ಸಂಚಾರ ನಡೆಸುತ್ತಿವೆ. ಓಲಾ, ಉಬರ್, ಏರ್ಪೋಟ್ ಟ್ಯಾಕ್ಸಿ ಸೇರಿದಂತೆ ಎಲ್ಲಾ ಕ್ಯಾಬ್ ಗಳ ಸಂಚಾರ ಎಂದಿನಂತೆ ಮುಂದುವರೆದಿದೆ. ಜನರು ಸಹ ಎಂದಿನಂತೆ ಏರ್ಪೋಟ್ ಗೆ ಟ್ಯಾಕ್ಸಿಗಳ ಮೂಲಕ ಪ್ರಯಾಣಿಸುತ್ತಿದ್ದಾರೆ.