ಬೆಂಗಳೂರು: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ವತಿಯಿಂದ ಜನಾಕ್ರೋಶ ಯಾತ್ರೆ ನಡೆಯುತ್ತಿದೆ. ನಾಳೆಯಿಂದ ಮೂರನೇ ಹಂತದ ಜನಾಕ್ರೋಶ ಯಾತ್ರೆ ಆರಂಭವಾಗಲಿದೆ.
ನಾಳೆ ಬೆಳಿಗ್ಗೆ 11:30ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಲಿದ್ದಾರೆ. ದಾವಣಗೆರೆಯಲ್ಲಿ ಬಿ.ವೈ. ವಿಜಯೇಂದ್ರ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ನಾಳೆ ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದೆ.
ಹೀಗಾಗಿ ನಾಳೆಯಿಂದ ಶುಕ್ರವಾರದವರೆಗೂ 5 ದಿನಗಳ ಕಾಲ ನಿರಂತರ ಜನಾಕ್ರೋಶ ಯಾತ್ರೆ ನಡೆಯಲಿದೆ. ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳನ್ನೊಳಗೊಂಡ ಮೂರನೇ ಹಂತದ ಜನಾಕ್ರೋಶ ಯಾತ್ರೆ ನಾಳೆಯಿಂದ ಆರಂಭವಾಗಲಿದೆ. ನಾಲ್ಕನೇ ಹಾಗೂ ಕೊನೆಯ ಹಂತದ ಯಾತ್ರೆ ಈ ತಿಂಗಳಾಂತ್ಯಕ್ಕೆ ನಡೆಯಲಿದೆ ಎಂಬುವುದು “ಕರ್ನಾಟಕ ನ್ಯೂಸ್ ಬೀಟ್”ಗೆ ಬಿಜೆಪಿಯ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.