ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಚಿರತೆ ಓಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮನೆಯೊಂದರ ಅಂಗಳದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಬೂರು ದಿಂದೊಟ್ಟು ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿದೆ. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.