ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಶುಭ ಸುದ್ದಿ ಸಿಕ್ಕಿದೆ. ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO LPSC Recruitment 2025) ಖಾಲಿ ಇರುವ 23 ಹುದ್ದೆಗಳ ನೇಮಕಾತಿಗಾಗಿಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 26 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)
ಹುದ್ದೆಗಳ ಹೆಸರು: ಟೆಕ್ನಿಕಲ್ ಅಸಿಸ್ಟಂಟ್, ಸಬ್-ಆಫೀಸರ್ ಇತ್ಯಾದಿ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 26
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಟೆಕ್ನಿಕಲ್ ಅಸಿಸ್ಟಂಟ್, ಸಬ್ ಆಫೀಸರ್, ಟೆಕ್ನಿಶಿಯನ್ ಬಿ, ಲೈಟ್ ವೆಹಿಕಲ್ ಡ್ರೈವರ್ ಎ, ಹೆವಿ ವೆಹಿಕಲ್ ಡ್ರೈವರ್ ಎ ಗ್ರೇಡ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 44,900 ರೂಪಾಯಿಯಿಂದ 1.42 ಲಕ್ಷ ರೂಪಾಯಿ ವೇತನ ನೀಡಲಾಗುತ್ತದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗುತ್ತದೆ.
ಎಸ್ಸೆಸ್ಸೆಲ್ಸಿ, ಐಟಿ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 18-35 ವರ್ಷದೊಳಗಿನವರು ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಮೊದಲಿಗೆ ಎಲ್ಲ ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕ ಪಾವತಿಸಬೇಕು. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳು ಹಾಗೂ ಪಿಡಬ್ಲ್ಯೂಬಿಡಿಯವರಿಗೆ ಎಲ್ಲ ಶುಲ್ಕ ರಿಫಂಡ್ ಆಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೂಡಲೇ https://www.lpsc.gov.in/ ವೆಬ್ ಸೈಟ್ ಗೆ ಭೇಟಿ ನೀಡಬಹುದು.