ರಾಜ್ಯದ ಕರಾವಳಿಯಲ್ಲಿ ಮಳೆರಾಯನ ಅಟ್ಟಹಾಸ ಇನ್ನೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಯಾಗಿರುವ ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಮಲೆನಾಡಿನ ಕೊಡಗು, ಚಿಕ್ಕಮಗಳೂರು ಹಾಗೂ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.