ಹಾಸನ: ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಈಗ ಒಂದೇ ದಿನ ಮೂವರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಒಂದೇ ದಿನ ಜಿಲ್ಲೆಯಲ್ಲಿ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಪ್ರೊ.ಮುತ್ತಯ್ಯ ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅವರು ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ, ಇಂದು ಬೆಳಗ್ಗೆ ಚಹಾ ಕುಡಿಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.