ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಪ್ರವಾಸಿಗರ ಹುಚ್ಚಾಟ ಹೆಚ್ಚಾಗಿದ್ದು ಆತಂಕ ಹಾಗೂ ಆಕ್ರೋಶ ವ್ಯಕ್ತವಾಗುತ್ತಿದೆ.
ಪ್ರವಾಸಿಗರು ಬಾರಿನಲ್ಲಿ ಕುಡಿದು ರಸ್ತೆಯಲ್ಲೇ ಮಾರಾಮಾರಿ ನಡೆಸುತ್ತಿದ್ದಾರೆ. ಕುಡಿದ ಮತ್ತಿನಲ್ಲಿ ಎಣ್ಣೆ ವಿಚಾರಕ್ಕೆ ಫೈಟಿಂಗ್ ನಡೆದಿರುವ ಘಟನೆಯೊಂದು ನಡೆದಿದೆ. ಮೂಡಿಗೆರೆ ಪಟ್ಟಣದ ಚಂದನ್ ವೈನ್ಸ್ ಬಳಿ ಈ ಘಟನೆ ನಡೆದಿದೆ. ಪ್ರವಾಸಿಗರು ಎಣ್ಣೆ ಗುಂಗಿನಲ್ಲಿ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.